ಚಂಡೀಗಢ : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಇಂದು ನಯಾಬ್ ಸಿಂಗ್ ಸೈನಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ಇಂದು ಹರಿಯಾಣದ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಇಂದು ನಯಾಬ್ ಸಿಂಗ್ ಸೈನಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಪಂಚಕುಲದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮಧ್ಯಾಹ್ನ 1.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ವಿಐಪಿಗಳ ಆಗಮನ ಬೆಳಗ್ಗೆ 11 ಗಂಟೆಯಿಂದ ಆರಂಭವಾಗಲಿದೆ. ಇನ್ನು ವಿಐಪಿಗಳ ಆಗಮನದ ಹಿನ್ನೆಲೆ ಪಂಚಕುಲದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

































