Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

2 ಬಸ್ ಗಳ ಮುಖಾಮುಖಿ ಡಿಕ್ಕಿ ; ಒಡಿಶಾದಲ್ಲಿ 10 ಜನರ ದುರ್ಮರಣ

0

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ಮಧ್ಯ ರಾತ್ರಿ ಎರಡು ಬಸ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 10 ಮಂದಿ ಸಾವನ್ನಪ್ಪಿ, 8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಖಾಸಗಿ ಬಸ್‌ನ ನಡುವೆ ಗಂಜಾಂ ಜಿಲ್ಲೆಯ ದಿಗಪಹಂಡಿ ಸಮೀಪ ಈ ಡಿಕ್ಕಿ ಸಂಭವಿಸಿದ್ದು, ಗಾಯಾಳುಗಳನ್ನು ಎಂಕೆಸಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಚಾಲಕರ ಅಜಾಗರೂಕತೆಯೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಈ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿತ್ತು.

Leave A Reply

Your email address will not be published.