ಬೆಂಗಳೂರು : ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ಕಾರ್ಡ್ ಅಮಾನತು ಮಾಡಲಾಗುತ್ತೆ.2,46,951 ಕಾರ್ಡನ್ನ ನಕಲಿ ಎಂದು ಕಾರ್ಮಿಕ ಇಲಾಖೆ ಲಿಸ್ಟ್ ಮಾಡಿದೆ. ಕಟ್ಟಡ& ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಬರೋಬ್ಬರಿ 38 ಲಕ್ಷದ 42 ಸಾವಿರ ಕಾರ್ಮಿಕರು ನೋಂದಣಿ ಮಾಡಿ ಕೊಂಡಿದ್ದಾರೆ.
38.42 ಲಕ್ಷದ ಪೈಕಿ 2.46 ಸಾವಿರ ಕಾರ್ಡ್ ಅಮಾನತು ಮಾಡಲಾಗಿದ್ದು ಹಾವೇರಿಯಲ್ಲಿ ಅತೀ ಹೆಚ್ಚು 1,69,180 ಕಾರ್ಡ್ ಗಳು ಅಮಾನತು ಮಾಡಲಾಗಿದೆ. ಮದುವೆ, ಮರಣ, ಹೆರಿಗೆ, ಅಪಘಾತ ಸಂದರ್ಭದಲ್ಲಿ ದೊಡ್ಡ ಮೊತ್ತದ ಆರ್ಥಿಕ ನೆರವು ದೊರೆಯುತ್ತೆ. ಈ ಹಿನ್ನೆಲೆಯಲ್ಲಿ ನಕಲಿ ಜಾಬ್ ಕಾರ್ಡ್‌ಗಳ ಸೃಷ್ಟಿ ಮಾಡಿದ್ದು ಆನ್ ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯುವ ಅವಕಾಶ ಇದ್ದು ಲಕ್ಷಾಂತರ ಜನ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ಕಾರ್ಮಿಕ ಇಲಾಖೆಗೆ ದಾಖಲೆ ಪರಿಶೀಲನೆ ಕಷ್ಟವಾಗ್ತಿದೆ.
ಇದು ನಕಲಿ ಕಾರ್ಡ್ ಪಡೆಯುವವರಿಗೆ ಪ್ಲಸ್ ಪಾಯಿಂಟ್ ಆಗ್ತಿದ್ದು ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್ ಸಂಯೋಜಿಸಿ ಆಧಾರ್ ಕಾರ್ಡ್ ಆಧಾರಿತ ನೋಂದಣಿ ಮಾಡುವ ಮೂಲಕ ಅರ್ಹರಿಗೆ ಮಾತ್ರ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಮೊಬೈಲ್ ಆಪ್ ಮೂಲಕ ಇ-ಹಾಜರಾತಿ ಸವಲತ್ತು ಕಲ್ಪಿಸಲು ಪ್ಲ್ಯಾನ್ ಮಾಡಿದ್ದು ಕಟ್ಟಡ & ಇತರೆ ನಿರ್ಮಾಣ ಕಾಮಗಾರಿ ನಡೆಯುವ ಸ್ಥಳಕ್ಕೆ ಮೊಬೈಲ್ ವ್ಯಾನ್ ತೆರಳಿ ಖುದ್ದು ಕಾರ್ಮಿಕರ ನೋಂದಣಿ ಮಾಡಲು ಯೋಜನೆ ರೂಪಿಸಿದೆ. ಸ್ಥಳದಲ್ಲೇ ಇ-ಕಾರ್ಡ್ ಕೊಡುವ ವ್ಯವಸ್ಥೆಯನ್ನೂ ಜಾರಿಗೆ ತರಲು ತಯಾರಿ ಮಾಡಿದ್ದು ಕಾರ್ಮಿಕ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಕೇಂದ್ರ ಸ್ಥಾಪಿಸಿ ನೈಜ ಕಟ್ಟಡ ಕಾರ್ಮಿಕರಿಗೆ ಸವಲತ್ತು ದೊರಕಿಸಿಕೊಡುವುದರ ಜೊತೆಗೆ ಬೋಗಸ್ ಕಾರ್ಡ್ ಪತ್ತೆಗೂ ಹೆಜ್ಜೆ ಇಟ್ಟಿದೆ.