ಚಿಕ್ಕಮಗಳೂರು : ದತ್ತಪೀಠದಲ್ಲಿ ನಡೆಯಲಿರುವ ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ರಾತ್ರಿ 11 ಗಂಟೆಯಿಂದ ಭಾನುವಾರ ಬೆಳಗ್ಗೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ನಾಳೆ ಮಧ್ಯಾಹ್ನ ನಗರದ ಕಾಮಧೇನು ಗಣಪತಿ ದೇವಸ್ಥಾನ ದಿಂದ ಹೊರಡುವ ಬೃಹತ್ ಶೋಭಾ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, ಶನಿವಾರ ದತ್ತ ಜಯಂತಿ ನಡೆಯಲಿದೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ದತ್ತ ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕ್ಕೆ ದರ್ಶನ ಪಡೆಯಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.