ವಿಜಯಪುರ: ಬೃಹತ್ ಗೋದಾಮಿನಲ್ಲಿ ಮೆಕ್ಕೆಜೋಳ ತುಂಬಿದ ಚೀಲಗಳು ಕುಸಿದ ಮೂಟೆಗಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದೆ.
ಮೃತ ಕಾರ್ಮಿಕರನ್ನು ಬಿಹಾರ ಮೂಲದ ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ (29) ಸಂಬೂ ಮುಖಿಯಾ(26) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ 10 ಕ್ಕೂ ಹೆಚ್ಚು ಕಾರ್ಮಿಕರು ಮೆಕ್ಕೆಜೋಳ ರಾಶಿಯೊಳಗೆ ಸಿಲುಕಿದ್ದರು. ಕಾರ್ಮಿಕರ ರಕ್ಷಣೆಗಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಎಸ್ಡಿಆರ್ಫ್ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ರಕ್ಷಣಾ ತಂಡ ಸೋನುಕುಮಾರ್ ಎಂಬಾತನನ್ನು ರಕ್ಷಿಸಿದೆ.
ಇನ್ನು ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರ ಮೃತದೇಹವನ್ನು ತೆಗೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ ತಡೆದ ಬಿಹಾರ ಮೂಲದ ಕಾರ್ಮಿಕರು ಪ್ರತಿಭಟನೆ ನಡೆಸಲು ಯತ್ನಿಸಿದರು. ಮೊದಲು ಪರಿಹಾರ ಘೋಷಿಸಿ ನಂತರ ಶವ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದು, ಈ ವೇಳೆ ಪೊಲೀಸರ ಜೊತೆ ಬಿಹಾರ ಮೂಲದ ಕಾರ್ಮಿಕರು ವಾಗ್ವಾದ ನಡೆಯಿತು. ನಂತರ ಸ್ಥಳಕ್ಕೆ ಆಗಮಿಸಿದ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್ ಮತ್ತು ಎಸ್‌ಪಿ ಋಷಿಕೇಷ ಪ್ರತಿಭಟನೆಯನ್ನು ಮನವೊಲಿಸಲು ಯತ್ನಿಸಿದರು.ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು