ದಾವಣಗೆರೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾಯೋಜನೆಯಡಿ 2022 ರ ಮುಂಗಾರು, ಹಿಂಗಾರು ಹಂಗಾಮುಗಳಲ್ಲಿ ರೈತರು ವಿಮೆ ಮಾಡಿಸಿದ ಪ್ರಸ್ತಾವನೆಗಳು ಹಾಗೂ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ವಿಮಾ ಸಂಸ್ಥೆಯವರು ಪರಿಶೀಲಿಸಿ ದಾವಣಗೆರೆ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ 68 ಹಾಗೂ ಹಿಂಗಾರು ಹಂಗಾಮಿನಲ್ಲಿ ಒಬ್ಬ ರೈತರ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದಾರೆ.
ತಿರಸ್ಕøತಗೊಂಡ ರೈತರ ಪ್ರಸ್ತಾವನೆಗಳ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆದುದರಿಂದ 2022 ರ ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಲ್ಲಿ ವಿಮೆ ಮಾಡಿಸಿರುವ ರೈತರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾ.2 ರ ಒಳಗೆ ಸಲ್ಲಿಸಲು ಆಕ್ಷೇಪಣೆ ಸಲ್ಲಿಸಲು ತಿಳಿಸಲಾಗಿದೆ.
ಸಲ್ಲಿಸಬೇಕಾದ ದಾಖಲೆಗಳು: 2022-23ರ ಪಹಣಿಯಲ್ಲಿ ವಿಮೆಗೆ ನೊಂದಾಯಿಸಿದ ಬೆಳೆ ನಮೂದಾಗಿರಬೇಕು, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಶೀದಿ ಹಾಜರು ಪಡಿಸುವುದು, ವಿಮೆಗೆ ನೊಂದಾಯಿತ ಬೆಳೆಯ ಉತ್ಪನ್ನವನ್ನು ಕೃಷಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಹಾಜರು ಪಡಿಸುವುದು.