ನವದೆಹಲಿ: 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಅವರು ಪತ್ರಕರ್ತರೊಂದಿಗೆ ಸಂವಾದ ನಡೆಸಿ, ” ದೇಶದ ಸರ್ಕಾರವನ್ನು ಬದಲಾಯಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮವಾಗಿ ಕೆಲಸ ಮಾಡುತ್ತಿದೆ. ಮಾತ್ರವಲ್ಲದೆ ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಶುಭವೇ ಆಗುತ್ತದೆ ಎಂಬ ನಂಬಿಕೆ ನನಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
NIMHANS Recruitment 2023: ವಿವಿಧ ಖಾಲಿ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ
ಬಿಜೆಪಿ ಪಕ್ಷದಲ್ಲಿ ಸಾಕಷ್ಟು ನ್ಯೂನ್ಯತೆಗಳಿವೆ. ಪ್ರತಿಪಕ್ಷಗಳು ಸಮರ್ಪಕವಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಕೈ ಜೋಡಿಸಿದರೆ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸುಲಭವಾಗಿ ಸೋಲಿಸಬಹುದು. ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ, ಇದೆಲ್ಲವನ್ನೂ ಮೀರಿ 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಆಶ್ಚರ್ಯಕರ ರೀತಿಯಲ್ಲಿ ಪಕ್ಷ ಹೊರಹೊಮ್ಮಲಿದೆ. ನೋಡುತ್ತಿರಿ, ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ’ ಎಂದು ಅವರು ಹೇಳಿದ್ದಾರೆ.