ಮುಂಬೈ : 2024ರ ವಿಶ್ವ ಸುಂದರಿ ಪಟ್ಟವನ್ನ ಕ್ರಿಸ್ಟೈನಾ ಪಿಸ್ಕೋವಾ ಮುಡಿಗೇರಿಸಿಕೊಂಡಿದ್ದಾರೆ. ಶನಿವಾರದಂದು ಮುಂಬೈನಲ್ಲಿ 71ನೇ ಆವೃತ್ತಿಯ ವಿಶ್ವ ಸುಂದರಿ 2024 ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಅದ್ಧೂರಿ ಸಮಾರಂಭದಲ್ಲಿ ಜೆಕ್ ರಿಪಬ್ಲಿಕ್ (ಯುರೋಪ್) ಮೂಲದ ಬೆಡಗಿ ಕ್ರಿಸ್ಟೈನಾ ಪಿಸ್ಕೋವಾ ವಿಶ್ವದ ಅತ್ಯಂತ ಸುಂದರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಿಸ್ ಲೆಬನಾನ್ ಯಾಸ್ಮಿನಾ ಜೈಟೌನ್ ಮೊದಲ ರನ್ನರ್ ಆಗಿ ಗುರುತಿಸಿಕೊಂಡಿದ್ದಾರೆ. ಇದೇ ಸ್ಪರ್ಧೆಯಲ್ಲಿ 22 ವರ್ಷದ ಸಿನಿ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದಾರೆ. ಇನ್ನು ಕ್ರಿಸ್ಟೈನಾ ಪಿಸ್ಕೋವಾ ಕಾನೂನು ಮತ್ತು ವ್ಯವಹಾರ ಆಡಳಿತದಲ್ಲಿ ಎರಡು ಡಿಗ್ರಿ ಅಧ್ಯಯನ ಮಾಡಿದ್ದಾರೆ.
ಮಾತ್ರವಲ್ಲದೆ ಕ್ರಿಸ್ಟಿನಾ ಪಿಸ್ಕೊ ಫೌಂಡೇಶನ್ ಅನ್ನು ಸ್ಥಾಪಿಸಿದ್ದಾರೆ. ಭಾರತದಲ್ಲಿ 28 ವರ್ಷಗಳ ಬಳಿಕ ನಡೆದ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಕ್ರಿಸ್ಟಿನಾ ಪಿಸ್ಕೋವಾ (Krystyna Pyszkova) ಗೆದ್ದು ಬೀಗಿದ್ದಾರೆ. 71ನೇಯ ಮಿಸ್ ವರ್ಲ್ಡ್ ಆಗಿ ಕ್ರಿಸ್ಟಿನಾ ಪಿಸ್ಕೋವಾ ಸಂಭ್ರಮಿಸಿದ್ದಾರೆ. 2024ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸಿನಿ ಶೆಟ್ಟಿ ನಿರಾಸೆ ಅನುಭವಿಸಿದರು. ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅಗ್ರ ಎಂಟರಲ್ಲಿ ಸ್ಥಾನ ಪಡೆದ ನಂತರ ಸ್ಪರ್ಧೆಯಿಂದ ಹೊರ ಬಿದ್ದರು. ಈ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸು ನುಚ್ಚು ನೂರಾಯಿತು. ಮುಂಬೈನ ಜಿಯೋ ವಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳಾದ ಕೃತಿ ಸನೋನ್, ಪೂಜಾ ಹೆಗ್ಡೆ, ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸಮಾಜ ಸೇವಕಿ ಅಮೃತಾ ಫಡ್ನವಿಸ್ ಸೇರಿ ಅನೇಕ ಗಣ್ಯರು ಭಾಗಿಯಾಗಿದ್ದರು.