ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಪೂರ್ವಸಿದ್ಧತೆಗಳಿಗಾಗಿ ಮೇ 29ರಿಂದಲೇ ಶಾಲೆಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ಜೊತೆಗೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನೂ ನಿಗದಿಪಡಿಸಿದೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 5, 8, 9 ನೇ ತರಗತಿಯ ಎಸ್‌ಎ-2 ಮೌಲ್ಯಾಂಕನ ಸೇರಿ ಉಳಿದ 1 ರಿಂದ9 ನೇ ತರಗತಿಗಳ ಫಲಿತಾಂಶ ಏ.8 ರಂದು ಪ್ರಕಟವಾಗಲಿದೆ.