2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯಕ್ಕಾಗಿ ಬಿಡ್ಡಿಂಗ್ ನಡೆಸಲು ಭಾರತ ಸಿದ್ಧತೆ ನಡೆಸುತ್ತಿದೆ.
ಇದರ ಜತೆಗೆ ಭಾರತದ ಮಣ್ಣಿನ ಕ್ರೀಡೆಯಾದ ಕಬಡ್ಡಿ, ಖೋಖೋ, ಚೆಸ್, ಸ್ಮ್ಯಾಶ್, ಟಿ20 ಕ್ರಿಕೆಟ್ ಜತೆಗೆ ಯೋಗವನ್ನೂ ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.
ಇದಕ್ಕೆ ಸಂಬಂಧಿಸಿ ಭಾರತೀಯ ಕ್ರೀಡಾ ಪ್ರಾಧಿಕಾರದ ಮಿಷನ್ ಒಲಿಂಪಿಕ್ ಸೆಲ್ (ಎಂಒಸಿ) ಈಗಾಗಲೇ ನೂತನ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವರದಿ ಸಲ್ಲಿಸಿದೆ.
				
															
                    
                    
                    

































