ದೇಶಾದ್ಯಂತ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಕೇಂದ್ರ ಸರ್ಕಾರ 23 ಕ್ರೂರ ತಳಿಯ ಶ್ವಾನಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸಲು ಪ್ರಸ್ತಾವ ಸಲ್ಲಿಸಿದೆ.
ಈ ತಳಿಗಳನ್ನು ‘ಮಾನವರಿಗೆ ಬೆದರಿಕೆ’ ಎಂದು ಪರಿಗಣಿಸಲಾಗಿದ್ದು, ಇದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ತಿಳಿಸಿದ್ದಾರೆ.
ಈ ಸಂಬಂಧ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿಷೇಧ ಹೇರುವುದನ್ನು ಖಚಿತಪಡಿಸಲು ಸೂಚಿಸಿದ್ದಾರೆ.