ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಇದೇ 23 ಮತ್ತು 24ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ ಆನ್ ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು. ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ
ಈ ವಿಚಾರದಲ್ಲಿ ವಿಷಯ ತಜ್ಞರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಯುಜಿಸಿಇಟಿ 2026ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ:23.04.2026 ಮತ್ತು 24.04.2026 ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಯಲ್ಲಿನ 16 ವರ್ಷನ್ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಒದಗಿಸಲಾದ https://cetonline.karnataka.gov.in/kea/ದಿನಾಂಕ:30.04.2026 ಸಂಜೆ 5:00 ರೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ಹೇಳಲಾಗಿದೆ.

































