ಚಿಕ್ಕಮಗಳೂರು: ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿಕ್ಕಮಗಳೂರು ನಗರದ ಪೊಲೀಸ್ ಬಡಾವಣೆಯಲ್ಲಿರುವ ಆಲ್ದೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಅಸ್ವಸ್ಥರಾದ ವಿದ್ಯಾರ್ಥಿಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರಾತ್ರಿ ಊಟ ಮಾಡಿದ ನಂತರ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿದ್ದು, ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟದಲ್ಲಿ ಹುಳಗಳು ಪತ್ತೆಯಾಗಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
(ಸಾಂದರ್ಭಿಕ ಚಿತ್ರ)