ನವದೆಹಲಿ : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು ತಮ್ಮ ಸರ್ಕಾರವು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ಸಹಾಯವನ್ನು ನೀಡುವ ಭರವಸೆಯನ್ನು ಈಡೇರಿಸುತ್ತದೆ ಎಂದು ಆಶ್ವಾಸನೆ ನೀಡಿದ್ದಾರೆ.
ಮಾಸಿಕ ಬೆಂಬಲದ ಮೊದಲ ಕಂತನ್ನು ಮಾರ್ಚ್ 8ರೊಳಗೆ ಅವರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿಯ ಪ್ರಣಾಳಿಕೆಯು ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಮಾಸಿಕ 2,100 ರೂ. ಬೆಂಬಲ ನೀಡುವ ಘೋಷಣೆಯನ್ನು ಮೀರಿಸುವ ಗುರಿಯನ್ನು ಹೊಂದಿತ್ತು.
ಮಾಸಿಕ ಬೆಂಬಲದ ಮೊದಲ ಕಂತನ್ನು ಮಾರ್ಚ್ 8 ರೊಳಗೆ ಅರ್ಹ ಮಹಿಳಾ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ರೇಖಾ ಗುಪ್ತಾ ಘೋಷಿಸಿದ್ದಾರೆ. ಈ ವೇಳೆ ಹಿಂದಿನ ಎಎಪಿ ಸರ್ಕಾರವನ್ನು ಟೀಕಿಸಿದ ರೇಖಾ ಗುಪ್ತಾ, “ಪ್ರತಿ ಪೈಸೆಗೂ ಅವರು ಜನರಿಗೆ ಲೆಕ್ಕ ನೀಡಬೇಕಾಗುತ್ತದೆ” ಎಂದು ಹೇಳಿದ್ದಾರೆ.
ಇಂದು ರಾಮಲೀಲಾ ಮೈದಾನದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ದೆಹಲಿಯ ನಾಲ್ಕನೇ ಮಹಿಳಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.