ಬೆಂಗಳೂರು: ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದಿನಿಂದ ಅವಕಾಶ ಕಲ್ಪಿಸಿದೆ. ಡಿಸೆಂಬರ್ 2ರೊಳಗೆ ಅರ್ಜಿ ಸಲ್ಲಿಸಬೇಕು. ರಾಜ್ಯದ ಅಭ್ಯರ್ಥಿಗಳು ಆಯಾಯ ಪದವಿ ಕೋರ್ಸ್ ಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, 2024-25ನೇ ಸಾಲಿಗೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
