ಬೆಂಗಳೂರು : 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ.
ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಈ ಘಟನೆಯ ಸಂಬಂಧ ಮೃತನ ಸಹೋದರ ಶಿವರಾಜ್ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ. ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ 04 ಎಂದು ಯೋಗರಾಜ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.