ಬೆಂಗಳೂರು : 30 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡುತ್ತಿದ್ದು ಮನೆಮನೆಗೆ ತೆರಳಿ ಸಾಂಕ್ರಾಮಿಕ ರೋಗವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲು ಗೃಹ ಆರೋಗ್ಯ ಎಂಬ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ಮಾಡಿ ಕೊಂಡಿದೆ ಎಂದು ಖಾಸಗಿ ಸುಧಿ ಸಂಸ್ಥೆ ಎಂದು ವರದಿ ಮಾಡಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿಂದ ಧನಸಹಾಯ ಪಡೆದ ಈ ಯೋಜನೆಯ ಅಡಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ (CHO), ಆಶಾ ಕಾರ್ಯಕರ್ತರು ಮತ್ತು ಪ್ರಾಥಮಿಕ ಆರೋಗ್ಯ ಅಧಿಕಾರಿಗಳನ್ನು ಒಳಗೊಂಡಂತೆ ಎರಡರಿಂದ ನಾಲ್ಕು ಜನರ ತಂಡಗಳು ಪ್ರತಿ ಮನೆ-ಮನೆಗೆ ತೆರಳಿ ತಪಾಸಣೆ ನಡೆಸಿ ಮತ್ತು ಜಾಗೃತಿ ಮೂಡಿಸಲಿದೆ. ಈ ತಂಡ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಗರ್ಭಕಂಠ, ಸ್ತನ ಮತ್ತು ಬಾಯಿಯ ಕ್ಯಾನ್ಸರ್‌ಗಳ ಬಗ್ಗೆ ಜಾಗೃತಿ ಮೂಡಿಸಲಿದೆ.