ಚಿತ್ರದುರ್ಗ:ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 30.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ ಹೊಸದುರ್ಗದಲ್ಲಿ 18.2 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 4.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ 25.2 ಮಿ.ಮೀ, ಹಿರೇಗುಂಟನೂರಿನಲ್ಲಿ 1 ಮಿ.ಮೀ ಮಳೆಯಾಗಿದೆ.
5 ಮನೆಗಳು ಭಾಗಶಃ ಹಾನಿ: ಬುಧವಾರ ಸುರಿದ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 5 ಮನೆಗಳು ಭಾಗಶಃ ಹಾನಿ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿಯಾಗಿದ್ದು, ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.