ಮಂಗಳೂರು : ಇತ್ತೀಚಿನ ದಿನಗಳಲ್ಲಿ ನಕಲಿ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ವಂಚನೆ ಮಾಡುವ ಪ್ರಕರಣಗಳು ಹೆಚ್ಚುತ್ತಲೇ ಇದೆ. ಆದರೆ ಇದೀಗ ದರೋಡೆಕೋರರು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ಬಂದು ಬರೋಬ್ಬರಿ 30 ಲಕ್ಷ ರೂ ಲೂಟಿ ಮಾಡಿ ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಈ ಘಟನೆ ನಡೆದಿದೆ.
ಸುಲೈಮಾನ್ ಹಾಜಿ ಎಂಬುವವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಸುಲೈಮಾನ್ ಹಾಜಿ ಇವರ ಮನೆಗೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ದಾಳಿ ಮಾಡಿದ್ದಾರೆ. ಅದನ್ನು ಆ ಉದ್ಯಮಿಯೂ ನಂಬಿದ್ದು, ಸುಮಾರು ಎರಡು ಗಂಟೆಗಳ ಕಾಲ ತನಿಖೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿಯನ್ನು ದರೋಡೆಕೊರರು ದೋಚಿ ಪರಾರಿಯಾಗಿದ್ದಾರೆ.
ಸುಲೈಮಾನ್ ಅವರ ಮನೆಗೆ ತಡರಾತ್ರಿ ತಮಿಳುನಾಡು ಮೂಲದ ತಂಡ ಕಾರ್ ನಲ್ಲಿ ಆಗಮಿಸಿದೆ. ತಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ತನಿಖೆ ನಡೆಸಿದ್ದಾರೆ. ಅವರನ್ನು ಇಡಿ ಅಧಿಕಾರಿಗಳೇ ಎಂದು ನಂಬಿದ ಉದ್ಯಮಿಯು ಸಹಕರಿಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪ ನಡೆದಿದೆ