ನವದೆಹಲಿ : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ವಶಕ್ಕೆ ಪಡೆದಿದ್ದಾರೆ.
ಸಂಸತ್ತಿನ ಕಟ್ಟಡದ ಹೊರಗೆ ರಾಜಕಾರಣಿಗಳು ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಹಲವರು ರಸ್ತೆಗಳಲ್ಲಿ ಕುಳಿತಿದ್ದರು. ಧ್ವಜಗಳು ಮತ್ತು ಬ್ಯಾನರ್ಗಳನ್ನು ಹಿಡಿದು ಘೋಷಣೆ ಕೂಗುತ್ತಾ ಬ್ಯಾರಿಕೇಡ್ ತಳ್ಳಲು ಕೆಲವರು ಮುಂದಾದರು.
ಸಂಸತ್ ಭವನದ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿತ್ತು. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡರು. ನಾಲ್ಕೈದು ಬಸ್ಗಳನ್ನು ನಿಯೋಜಿಸಿ, ಬ್ಯಾರಿಕೇಡ್ ಹಾಕಿ ಪೊಲೀಸರು ಪ್ರತಿಭಟನೆಗೆ ತಡೆಯೊಡ್ಡಿದ್ದರು.