ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರು ಇನ್ನೂ ತಮ್ಮ ಪ್ರಾಣವನ್ನು ತ್ಯಾಗ ಮಾಡುತ್ತಿದ್ದಾರೆ. ವಿಧಿ 370ರ ರದ್ದತಿಗೆ ನಮ್ಮ ವಿರೋಧ ಸರಿಯಾಗಿದೆಂದು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಒಂದು ಕಡೆ ಜಮ್ಮು ಹಾಗೂ ಕಾಶ್ಮೀರ ಹಾಗೂ ಮತ್ತೊಂದೆಡೆ, ಮಣಿಪುರ ಹೊತ್ತಿ ಉರಿಯುತ್ತಿದ್ದು, ಇದು ದೇಶದ ಭದ್ರತಾ ಪರಿಸ್ಥಿತಿಗೆ ಬಂದಾಗ ಇನ್ನಷ್ಟು ಹೆಚ್ಚು ಕೆಲಸ ಮಾಡಬೇಕಾಗಿದೆ ಎಂಬುದನ್ನು ಸೂಚಿಸುತ್ತದೆ ಎಂದರು.
ಇನ್ನು ಈ ಹಿಂದೆ, ಸೈನಿಕರು ಕರ್ತವ್ಯದಲ್ಲಿದ್ದಾಗ ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ನಾವು ಮೌನ ಪ್ರಾರ್ಥನೆಯನ್ನು ಆಚರಿಸಿದ್ದೇವೆ, ಆದರೆ ಈಗ ಅದು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.