ನವದೆಹಲಿ: ದೇಶದ ಜನತೆ ನಮಗೆ ಮೂರನೇ ಬಾರಿ ಅವಕಾಶ ನೀಡಿದ್ದಾರೆ. ಅದಕ್ಕಾಗಿ ನಾವು ಋಣಿಯಾಗಿದ್ದೇವೆ. ಇದು ನಮಗೆ ಬಂದ ದೊಡ್ಡ ಗೆಲುವು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನದ ಮೊದಲ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರನೇ ಬಾರಿ ಗೆದ್ದಿರುವುದಕ್ಕೆ ನಮಗೆ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ನಾವು ಮೂರು ಪಟ್ಟು ಹೆಚ್ಚು ಕೆಲಸ ಮಾಡುತ್ತೇವೆ ಎಂದಿದ್ದಾರೆ.
