Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

4 ರಾಜ್ಯಗಳ ಚುನಾವಣೆ – ಕಾಂಗ್ರೆಸ್‌ ಮಹತ್ವದ ಸಭೆ

0

ನವದೆಹಲಿ: ಕರ್ನಾಟಕವನ್ನು ಗೆದ್ದ ಜೋಶ್‌ನಲ್ಲಿರುವ ಕಾಂಗ್ರೆಸ್‌ ಇದೀಗ ಮಧ್ಯಪ್ರವೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಯತ್ತ ಗಮನಹರಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ಪ್ರಾಬಲ್ಯ ಮೆರೆದರೆ ಆ ಬಳಿಕ ಎದುರಾಗುವ ಲೋಕಸಭಾ ಚುನಾವಣೆಗೆ ಪ್ರಬಲ ವೇದಿಕೆ ಈ ಮೂಲಕ ಸಜ್ಜಗೊಳಿಸಲು ಕಾಂಗ್ರೆಸ್ ಮುಂದಾಗಿದೆ.

ಈ ರಾಜ್ಯಗಳ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮೇ 24ರಂದು ಈ ರಾಜ್ಯದ ನಾಯಕರ ಸಭೆ ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಭೆಯ ಸಾರಥ್ಯ ವಹಿಸಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಆಡಳಿತ ವಿರೋಧಿ ಅಲೆಯನ್ನು ಹೋಗಲಾಡಿಸಲು ಕಾರ್ಯತಂತ್ರ ಮಾಡಲಿದೆ. ಜತೆಗೆ ಈ 4 ರಾಜ್ಯಗಳಲ್ಲಿಯೂ ಜೋಡೋ ಯಾತ್ರೆಯ ಲಾಭ ಪಡೆಯಲು ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ

Leave A Reply

Your email address will not be published.