4 ಉಗ್ರರ ರೇಖಾಚಿತ್ರ ಬಿಡುಗಡೆ

ಜಮ್ಮು & ಕಾಶ್ಮೀರದ ದೋಡಾದಲ್ಲಿ ಸೇನೆಯ ಚೆಕ್‌ಪೋಸ್ಟ್‌ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ವರು ಉಗ್ರರ ರೇಖಾಚಿತ್ರವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಭಯೋತ್ಪಾದಕರ ಬಂಧನಕ್ಕೆ ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಕಾಶ್ಮೀರ ಪೊಲೀಸರು ಘೋಷಿಸಿದ್ದಾರೆ. ಉಗ್ರರು ಭದರ್ವಾ, ಥಾತ್ರಿ, ಗಂಡೋಹ್‌ನ ಮೇಲ್ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪ್ರತಿ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ನಗದು ಬಹುಮಾನವನ್ನೂ ಘೋಷಿಸಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement