ಬಲೂಚಿಸ್ಥಾನ್ : ನೈಋತ್ಯ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಪ್ರಕ್ಷುಬ್ಧ ಖುಜ್ದಾರ್ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್‌ನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಕ್ಕಳ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳನ್ನು ಮೃಗಗಳು ಎಂಬುವುದಾಗಿ ಕರೆದಿದ್ದಾರೆ. ಮುಗ್ದ ಮಕ್ಕಳನ್ನುಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಸಂಪೂರ್ಣ ಅನಾಗರಿಕತೆಯ ಕೃತ್ಯ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಅತಿದೊಡ್ಡ ಪ್ರಾಂತ್ಯವಾದರೂ, ಬಲೂಚಿಸ್ತಾನ್ ಅದರ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿದೆ. ಇದು ದೇಶದ ಜನಾಂಗೀಯ ಬಲೂಚ್ ಅಲ್ಪಸಂಖ್ಯಾತರ ಕೇಂದ್ರವೂ ಆಗಿದೆ, ಅವರ ಸದಸ್ಯರು ಸರ್ಕಾರದಿಂದ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಮಾರ್ಚ್‌ನಲ್ಲಿ ಬಲೂಚಿಸ್ತಾನದಲ್ಲಿ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿನ ಮೇಲೆ ನಡೆದ ದಾಳಿಯಲ್ಲಿ ಬಿಎಲ್‌ಎ ದಂಗೆಕೋರರು 33 ಜನರನ್ನು ಕೊಂದರು, ಅದರಲ್ಲಿ ಹೆಚ್ಚಿನವರು ಸೈನಿಕರಾಗಿದ್ದರು.