ಪಾವಗಡ; ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆಯಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟದ ವೇಳೆ ನೀಡಿದ ಶೇಂಗಾ ಚಿಕ್ಕಿ ತಿಂದು ಸುಮಾರು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ.
ಮಕ್ಕಳಿಗೆ ಪಾವಗಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ವರದರಾಜು, BEO ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
( ಸಾಂದರ್ಭಿಕ ಚಿತ್ರ)

































