ಬೆಂಗಳೂರು: ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕಾರಣ ಈ ವರ್ಷ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕೆಲಸ ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ, ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಡಿಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ. “ಐದು ಗ್ಯಾರಂಟಿಗಳ ಕಾರಣದಿಂದಾಗಿ ಸರ್ಕಾರ ಹಣಕಾಸಿನ ಇಕ್ಕಟ್ಟಿನಲ್ಲಿದೆ ಎನ್ನುವುದನ್ನೂ ತಮ್ಮ ಪಕ್ಷದ ಅಸಮಾಧಾನಗೊಂಡಿರುವ ಶಾಸಕರು ಅರ್ಥಮಾಡಿಕೊಳ್ಳಬೇಕು. ಗುರುವಾರದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಶಾಸಕರಿಗೆ ಸರ್ಕಾರದ ಪರಿಸ್ಥಿತಿ ವಿವರಿಸಲಾಗುವುದು’ ಎಂದು ತಿಳಿಸಿದ್ದಾರೆ. “ನಾವು ಈ ವರ್ಷ ಐದು ಗ್ಯಾರಂಟಿಗಾಗಿ 40,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದೇವೆ. ಹಾಗಾಗಿ ಈ ವರ್ಷ ನಾವು ಅಭಿವೃದ್ಧಿಯನ್ನು ನೀಡಲು ಸಾಧ್ಯವಿಲ್ಲ. ನೀರಾವರಿ ಮತ್ತು ಸಾರ್ವಜನಿಕ ಕೆಲಸಗಳಲ್ಲಿಯೂ ಅಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ. ಆದರೆ ನಿರೀಕ್ಷೆಗಳು ಹೆಚ್ಚಿವೆ, ನಾವು ಶಾಸಕರಿಗೆ ಆದಷ್ಟು ದಿನ ದೂಡುವಂತೆ ಕೇಳಿದ್ದೇವೆ. ನಾವು ಸಿಎಲ್‌ಪಿ ಸಭೆಯಲ್ಲಿ ಈ ಬಗ್ಗೆ ಅವರಿಗೆ ವಿವರಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ತಾಳ್ಮೆಯಿಂದ ಇರುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ದಿವಾಳಿತನ ಸೃಷ್ಟಿಸಿತು. ಹೆಚ್ಚುವರಿ ಟೆಂಡರ್ ನೀಡಿ ಖಜಾನೆ ಖಾಲಿಯಾಗಿದೆ. ಆದರೆ ನಾವು ಗ್ಯಾರಂಟಿ ಭರವಸೆಗಳನ್ನು ಉಳಿಸಿಕೊಳ್ಳಬೇಕಾಗಿತ್ತು. ಅದರಂತೆ ನಾವು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ. ಆದ್ದರಿಂದ ಎಲ್ಲರೂ ತಾಳ್ಮೆಯಿಂದಿರಬೇಕು ಎಂದು ಮನವಿ ಮಾಡಿದರು. ಈ ತಿಂಗಳ ಆರಂಭದಲ್ಲಿ ಸಿದ್ದರಾಮಯ್ಯ ಅವರು 2023-24 ಬಜೆಟ್ ಅನ್ನು ಮಂಡಿಸಿದರು. ಇದರಲ್ಲಿ ಅವರು ಕಾಂಗ್ರೆಸ್‌ನ ಐದು ಭರವಸೆಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಯೋಜನೆ ಮತ್ತು ಯುವ ನಿಧಿಗೆ 35,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ. ಇದರಿಂದಾಗಿ 12,522 ಕೋಟಿ ರೂ. ಆದಾಯ ಕೊರತೆ ಹಾಗೂ ಸಾಲ ಹೆಚ್ಚಾಗಿದೆ.
[vc_row][vc_column]
BREAKING NEWS
- ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಜಮ್ಮು ಕಾಶ್ಮೀರದ ಡೆಪ್ಯುಟಿ ಎಸ್ಪಿ ಅರೆಸ್ಟ್
- ಕೆಲಸ ತೊರೆದ ಮಹಿಳೆ 8 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯ ಕಟ್ಟಿ ಬೆಳೆಸಿದರು
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!
- ಈ ಕಾರಣಕ್ಕೆ ಮೈಸೂರು ದಸರ ಸರಳ.! ಡಾ.ಹೆಚ್.ಸಿ ಮಹದೇವಪ್ಪ
- ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?