ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಒಟ್ಟು 543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಅತ್ತ, ಇಂಡಿಯಾ ಒಕ್ಕೂಟವೂ ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಮಧ್ಯೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ.
ಅಮಿತ್ ಶಾ ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.