ಬೆಂಗಳೂರು; ಸರ್ಕಾರಿ ಶಾಲೆಗಳೂ ಸೇರಿದಂತೆ ರಾಜ್ಯ ಪಠ್ಯ ಕ್ರಮದ ಎಲ್ಲ ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಾಂಕನ (SA-2) ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಇತ್ತೀಚೆಗೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ವೇಳಾಪಟ್ಟಿಯಂತೆಯೇ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಮಾರ್ಚ್ 11 ರಿಂದ 14ರವರೆಗೆ 5ನೇ ತರಗತಿಗೆ ಮತ್ತು ಮಾರ್ಚ್ 11 ರಿಂದ 18 ರವರೆಗೆ 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಯಲಿದೆ.