ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಕೊಟ್ಟಿದೆ.
ಜೂ.13ರಂದು ಹಾವೇರಿ, ಧಾರವಾಡ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
				 
         
         
         
															 
                     
                     
                     
                     
                    


































 
    
    
        