ಬೆಂಗಳೂರು : ಅಂತರ್ಜಲ ಕುಸಿತದಿಂದ ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಲಭ್ಯವಿರುವ ಶುದ್ದ ನೀರನ್ನು ಸಮರ್ಪಕವಾಗಿ ಬಳಸುವುದು ಬಹಳ ಮುಖ್ಯವಾಗಿದೆ ಎಂದು BWSSB ಹೇಳಿದ್ದು, ಇನ್ಮುಂದೆ ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡಿದರೆ 5000 ದಂಡ ಎಂದು ಆದೇಶಿಸಿದೆ.
ವಾಹನಗಳ ಸ್ವಚ್ಚತೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ – ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೂ ಬಳಕೆಗೂ ನಿಷೇಧ – ಆದೇಶವನ್ನು ಉಲ್ಲಂಘನೆ ಮಾಡುವವರ ವಿರುದ್ದ ರೂ. 5000/- ಗಳ ದಂಡ ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿತವಾಗಿದ್ದು, ಮುಂದಿನ ಬೇಸಿಗೆಯಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಅಭಾವ ಎದುರಾಗಬಹುದು ಎಂದು ಐಐಎಸ್ಸ್‌ಸಿ ವಿಜ್ಞಾನಿಗಳು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಈಗಿನಿಂದಲೇ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವುದು ಹಾಗೂ ಅನಗತ್ಯವಾಗಿ ಪೋಲು ಮಾಡುವುದನ್ನು ತಡೆಯುವುದು ಈ ಆದೇಶದ ಉದ್ದೇಶವಾಗಿದೆ.
ಈ ಆದೇಶವನ್ನು ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ ಯ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ. 5000/- ಜೊತೆಯಾಗಿ ಹೆಚ್ಚುವರಿಯಾಗಿ ಪ್ರತಿದಿನ ರೂ. 500/- ದಂಡ ವಿಧಿಸಲಾಗುವುದು ಎಂದು ಅಧಿಕೃತ ಆದೇಶ ಹೊರಡಿಸಿದರೆ.