ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆ.26 ಹಾಗೂ ಫೆ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.
1 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಲಿದೆ. ಜಿಲ್ಲೆಯ ಎಲ್ಲಾ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ತಪ್ಪದೇ https://skillconnect.kaushalkar.com ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಿ, ವಿಫುಲ ಉದ್ಯೋಗವಕಾಶಗಳನ್ನು ಪಡೆದಿಕೊಳ್ಳ ಬಹುದುಆಗಿದೆ.
ರಾಜ್ಯ ಸರ್ಕಾರ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. 18 ವರ್ಷ ತುಂಬಿದ, ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮೋ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು. ಸರ್ಕಾರ https://skillconnect.kaushalkar.com ವೆಬ್ಸೈಟ್ ಆರಂಭಿಸಿದೆ. ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಇದರಲ್ಲಿ ನೊಂದಣಿ ಮಾಡಿ ಅರ್ಜಿ ಸಲ್ಲಿಸಬಹುದು.