ಬೆಂಗಳೂರು : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ (PSI) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣರನ್ನು ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ.
ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಮತ್ತು ಸಂಬಂಧಿಕರು ಆಯ್ಕೆ ಆಗಿದ್ದಾರೆ. ಇದನ್ನೆಲ್ಲ ಅಶ್ವಥ್ ನಾರಾಯಣ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಪಿಎಸ್ಐ ಹಗರಣದ ಮರುತನಿಖೆಗೆ ಆದೇಶಿಸಿತ್ತು. ಈ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಶ್ವಥ್ ನಾರಾಯಣ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ.ವಿಚಾರಣೆಗೆ ಹಾಜರಾದ ಅಶ್ವಥ್ ನಾರಾಯಣ ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ, ಇದೊಂದು ರಾಜಕೀಯ ಪ್ರೇರಿತ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ ಹೇಳಿದ್ದಾರೆ.
545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ 2021 ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.