ನವದೆಹಲಿ: ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಬಣದ ಶಿವಸೇನೆ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ತಿಳಿಸಿದ್ದಾರೆ.
ಇನ್ನು ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಇಷ್ಟು ವರ್ಷಗಳಲ್ಲಿ ನೀಡಿದ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.