ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. 3 ಶಿಕ್ಷಕರ ಕ್ಷೇತ್ರ 3 ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಸಲಿದೆ.
ಜೂನ್ 3 ರಂದು ಮತದಾನ ನಡೆಯಲಿದ್ದು, ಜೂನ್ 6 ರಂದು ಫಲಿತಾಂಶ ಹೊರಬೀಳಲಿದೆ. ಆಗ್ನೇಯ,ನೈಋತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಗೆ ಮತ್ತು ಈಶಾನ್ಯ ನೈಋತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆ ದಿನ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.