ನವದೆಹಲಿ : ಹಿಮಾಚಲ ಪ್ರದೇಶದ ಕುಲ್ಲುವಿನ ಮಣಿಕರಣ್ ಗುರುದ್ವಾರ ಪಾರ್ಕಿಂಗ್ ಬಳಿ ಭೂಕುಸಿತ ಸಂಭವಿಸಿದ ಪರಿಣಾಮ ಆರು ಮಂದಿ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭೂಕುಸಿತದ ವೇಳೆ ಮರಗಳು ಉರುಳಿ ಬಿದ್ದ ಹಿನ್ನೆಲೆ ಆರು ಮಂದಿ ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶ್ವಿನ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.