ಜೈಪುರ : ಪೆಟ್ರೋಲ್ ಪಂಪ್ನ ಹೊರಗೆ 2 ಟ್ರಕ್ಗಳು ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ ಇನ್ನೂ ಹಲವಾರು ಮಂದಿ ಸಾವನ್ನಪ್ಪಿರುವ ಶಂಕೆ ಇದೆ.35 ಮಂದಿ ಗಾಯಗೊಂಡಿದ್ದಾರೆ.
ಅಜ್ಮೀರ್ ರಸ್ತೆಯಲ್ಲಿ ಮುಂಜಾನೆ 5:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಟ್ರಕ್ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಎನ್ಜಿ ಟ್ಯಾಂಕರ್ಗೆ ಬೆಂಕಿ ಹೊತ್ತಿಕೊಂಡಿದೆ.
ಸ್ಫೋಟವು ಎಷ್ಟು ತೀವ್ರವಾಗಿತ್ತು ಎಂದರೆ 300 ಮೀಟರ್ ವ್ಯಾಪ್ತಿಯೊಳಗೆ ಹಲವಾರು ವಾಹನಗಳು ಆವರಿಸಲ್ಪಟ್ಟವು ಮತ್ತು ಸಂಪೂರ್ಣವಾಗಿ ಸುಟ್ಟುಹೋಗಿವೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವು ಚಾಲಕರು ಸುಟ್ಟು ಕರಕಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.