ಬೆಂಗಳೂರು : ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ 6 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ನಾಲ್ವಾರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.