ಮೈಸೂರು: ಉರೂಸ್ ಹಿನ್ನೆಲೆಯಲ್ಲಿ ದರ್ಗಾಕ್ಕೆ ಬಂದಿದ್ದ ಕುಟುಂಬದವ 8 ಜನರು ಬಿಸಿಲ ಧಗೆಯಿಂದಾಗಿ ನದಿಯಲ್ಲಿ ಈಜಲು ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ನೀರಿನರ ರಭಸಕ್ಕೆ ಸಿಲುಕಿ ಆರು ಜನರು ನಿರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ.
ಇಬ್ಬರನ್ನು ಸ್ಥಳೀಯರು ರಕ್ಷಿಸಲಾಗುದ್ದು, ಮೃತರು ಯಾಸಿನ್ (23), ಫಾತಿಮ್ (30), ನೇಹಾನ್(19), ಅಲೀಂ (13), ಹುಮಾಯೂನ್ (7), ವರ್ಷ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಕೆ.ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಸಂತಾಪ: ಪರಿಹಾರ ಘೋಷಣೆ
ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು ಹಾರೈಸಿದ್ದಾರೆ.































