ಬೆಂಗಳೂರು :ನಗರದಲ್ಲಿ ನಡೆದಿದ್ದ 7 ಕೋಟಿ ರೂ. ದರೋಡೆಯ ಆರೋಪಿಯಾಗಿರುವ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್‌ನನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ದರೋಡೆ ಪ್ರಕರಣದ ಆರೋಪಿಯಾಗಿರುವ ಅಣ್ಣಪ್ಪ ನಾಯಕ್ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ. ಮೊದಲು ಕ್ಲೈಮ್ ಕೆಲಸ ಮಾಡುತ್ತಿದ್ದ ಆತನನ್ನು ಬೀಟ್ ಡ್ಯೂಟಿಗೆ ಹಾಕಲಾಗಿತ್ತು. ಸದ್ಯ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆ ಅಣ್ಣಪ್ಪ ನಾಯಕ್‌ನನ್ನು ಅಮಾನತು ಮಾಡಿ, ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್ ಆದೇಶ ಹೊರಡಿಸಿದ್ದಾರೆ.
ಸದ್ಯ ದರೋಡೆ ಪ್ರಕರಣದ ತನಿಖೆ ನಡೆಯುತ್ತಿದ್ದು, 7.11 ಕೋಟಿ ರೂ. ಪೈಕಿ 6.29 ಕೋಟಿ ರೂ.ಯನ್ನು ಸೀಜ್ ಮಾಡಲಾಗಿದೆ. ಜೊತೆಗೆ 7 ಜನರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ರಾಕೇಶ್, ರವಿ, ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್, ಕ್ಸೇವಿಯರ್, ಗೋಪಿ, ನವೀನ ಸೇರಿ ಒಟ್ಟು ಏಳು ದರೋಡೆಕೋರರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರಲ್ಲಿ ಕೆಲವರು ಪೊಲೀಸರ ಭಯಕ್ಕೆ ಸರೆಂಡರ್ ಆಗಿದ್ದಾರೆ
































