ಚಿತ್ರದುರ್ಗ: ಜಿಲ್ಲೆಯಲ್ಲಿ ಬುಧವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 71.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.2 ಮಿ.ಮೀ, ಚಿಕ್ಕಜಾಜೂರಿನಲ್ಲಿ 25.8 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಬಾಗೂರು 5.1 ಮಿ.ಮೀ, ಮಾಡದಕೆರೆಯಲ್ಲಿ 5.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 29.8 ಮಿ.ಮೀ, ಚಿತ್ರದುರ್ಗ-2ರಲ್ಲಿ 23.6 ಮಿ.ಮೀ, ಭರಮಸಾಗರ 6.4 ಮಿ.ಮೀ, ಸಿರಿಗೆರೆಯಲ್ಲಿ 29.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯಲ್ಲಿ 5 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 6.2 ಮಿ.ಮೀ, ನಾಯಕನಹಟ್ಟಿ 26.2 ಮಿ.ಮೀ ಹಾಗೂ ತಳಕು 9.4 ಮಿ.ಮೀ ಮಳೆಯಾಗಿದೆ.