ಕರ್ನೂಲ್: ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 8 ಭಕ್ತರು ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಬೊಲೆರೋ ವಾಹನದಲ್ಲಿದ್ದ ಚಿಕ್ಕಬಳ್ಳಾಪುರ ಮೂಲದ ಎಂಟು ಜನ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಬೊಲೆರೋ ವಾಹನದಲ್ಲಿ 21 ಭಕ್ತರು ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಆರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡ 13 ಜನರನ್ನು ಎಮಿಗನೂರು, ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
































