ಉತ್ತರಾಕಾಶಿ: ಭಾರೀ ಬೆಂಕಿ ಅವಘಡ ಸಂಭವಿಸಿ 9 ಮನೆಗಳು ಸುಟ್ಟು ಭಸ್ಮವಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಸಂಭವಿಸಿದೆ.
ಘಟನೆಯಿಂದಾಗಿ 25 ಕುಟುಂಬಗಳು ನಿರಾಶ್ರಿತರಾಗಿವೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಅದನ್ನು ನಂದಿಸಲು ಹಲವು ಗಂಟೆಗಳು ಬೇಕಾಯಿತು. ಬೆಂಕಿ ಅವಘಡದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ.
ಸಾವ್ನಿ ಗ್ರಾಮದಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 9 ಕಟ್ಟಡಗಳು ಸುಟ್ಟು ಬೂದಿಯಾಗಿವೆ. ಈ ಎಲ್ಲ ಕಟ್ಟಡಗಳು ಮರದಿಂದ ಮಾಡಲ್ಪಟ್ಟ ಪರಿಣಾಮ ಬೆಂಕಿಯ ತೀವ್ರತೆ ಇನ್ನಷ್ಟು ಹೆಚ್ಚಾಗಿದೆ. ಈ ಕಟ್ಟಡಗಳಲ್ಲಿ ಇರಿಸಲಾಗಿದ್ದ ಎಲ್ಲಾ ಸರಕುಗಳು ಸಹ ಸುಟ್ಟು ಭಸ್ಮವಾಗಿವೆ. ಈ ಬೆಂಕಿಯಲ್ಲಿ ಸುಟ್ಟು 76 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗ್ರಾಮಸ್ಥರು ಸಾಕಷ್ಟು ಶ್ರಮವಹಿಸಿ ಬೆಂಕಿಯನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ 3 ಗಂಟೆಯ ಹೊತ್ತಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಯಿತು.