ದೆಹಲಿ:ಸಂಸತ್ ಸ್ಥಾನ ಮರುಸ್ಥಾಪನೆ ಆದ ಬಳಿಕ ರಾಹುಲ್ ಗಾಂಧಿ ಬುಧವಾರ ಲೋಕಸಭೆಯಲ್ಲಿ ಮೊದಲ ಬಾರಿ ಭಾಷಣ ಮಾಡಿದ್ದಾರೆ.
ಆದರೆ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ತಮ್ಮ ಭಾಷಣದ ಪ್ರತಿಕ್ರಿಯೆ ಕೇಳಲು ನಿಲ್ಲದೆ ಅವರು ಸಂಸತ್‌ನಿಂದ ಹೊರ ನಡೆದಿದ್ದಾರೆ.ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರತಿಕ್ರಿಯೆ ನೀಡಲು ಮುಂದಾದಾಗ, ರಾಹುಲ್ ಗಾಂಧಿ ಹೊರ ನಡೆದಿದ್ದಾರೆ. ಆಗ ಅವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ನನಗಿಂತ ಮೊದಲು ಮಾತನಾಡಿದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾರೆ. ಸ್ತ್ರೀದ್ವೇಷಿಯಾಗಿರುವ ಪುರುಷ ಮಾತ್ರ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಬಹುದು.ಇದು ಅವರ ಕುಟುಂಬ ಮತ್ತು ಪಕ್ಷವು ಮಹಿಳೆಯರ ಬಗ್ಗೆ ಅವರ ಭಾವನೆ ಏನೆಂಬುವುದು ತೋರಿಸುತ್ತದೆ. ಇಂತಹ ಅಮಾನವೀಯ ನಡವಳಿಕೆಯನ್ನು ದೇಶದ ಸಂಸತ್ತಿನಲ್ಲಿ ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.