ಲಡಾಖ್: ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿ ಕನಿಷ್ಠ ಒಂಬತ್ತು ಭಾರತೀಯ ಸೇನಾ ಯೋಧರು ಪ್ರಾಣ ಕಳೆದುಕೊಂಡಿದ್ದು, ಒಬ್ಬರು ಗಾಯಗೊಂಡ ದುರಂತ ಘಟನೆ ಶನಿವಾರ ಲಡಾಖ್‌ನಲ್ಲಿ ಸಂಭವಿಸಿದೆ.
ಅಧಿಕಾರಿಗಳ ಪ್ರಕಾರ, ಘಟನೆಯು ಕ್ಯಾರಿ ಪಟ್ಟಣದಿಂದ ಕನಿಷ್ಠ ಏಳು ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. ಮೃತರಲ್ಲಿ ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಕೂಡ ಸೇರಿದ್ದಾರೆ.
ಯೋಧರು ಕರು ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದರು ಎಂದು ಲಡಾಖ್‌ನ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ತುರ್ತು ನಿಗಾ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ