ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆ ಬಾಲಾಕೋಟ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.
ಆಗಸ್ಟ್ 21 ರ ಬೆಳಿಗ್ಗೆ, ಇಬ್ಬರು ಭಯೋತ್ಪಾದಕರು ಬಾಲಾಕೋಟೆ ಸೆಕ್ಟರ್‌ನ ಹಮೀರ್‌ಪುರ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನ, ದಟ್ಟವಾದ ಮಂಜು ಇವುಗಳನ್ನು ಬಳಸಿಕೊಂಡು ನಿಯಂತ್ರಣ ರೇಖೆಯನ್ನು ದಾಟಲು ಭಯೋತ್ಪಾದಕರು ಯತ್ನಿಸುತ್ತಿದ್ದಾಗ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದೆ.
ಭದ್ರತಾ ಪಡೆಯವರು ಒಂದು ಎಕೆ47, ಎರಡು ಮ್ಯಾಗಜೀನ್, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಪಾಕಿಸ್ತಾನ ಮೂಲದ ಔಷಧ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿತ್ತು.