ಹೊಸಪೇಟೆ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರು ಅವರು ತಿಳಿಸಿದ್ದಾರೆ.
ಆಸಕ್ತ, ಅರ್ಹ ಪಿಯುಸಿ ವಿದ್ಯಾರ್ಥಿಗಳು ಹೊಸಪೇಟೆ ಗವಿಸಿದ್ದೇಶ್ವರ ನಗರದಲ್ಲಿರುವ ಉಪವಿಭಾಗದ ಕಾರ್ಮಿಕ ಅಧಿಕಾರಿ ಕಚೇರಿ ಹಾಗೂ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆ.14ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಮೊ.6363470761 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.