ಬೆಂಗಳೂರು: ಬಿಟ್ ಕಾಯಿನ್ ಅಕ್ರಮದ ಬಗ್ಗೆ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು, ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಕಿ ಹಾಗೂ ಇತರರ ವಿರುದ್ಧ ಕೆಂಪೇಗೌಡ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಿದ್ದ ಆರೋಪದಡಿ ಸಿಸಿಬಿ ತನಿಖಾಧಿಕಾರಿ ಹಾಗೂ ಇತರರ ವಿರುದ್ಧ ಕಾಟನ್ಪೇಟೆ ಠಾಣೆಯಲ್ಲಿ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಇದೇ ಪ್ರಕರಣದ ತನಿಖೆಯನ್ನು ಎಸ್ಐಟಿ ಕೈಗೆತ್ತಿಕೊಂಡಿದ್ದು, ಪ್ರಮುಖ ಆರೋಪಿಗಳು ಹಾಗೂ ಸಿಸಿಬಿ ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿವೆ.
ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಶ್ರೀಕಿ ಬಂಧನವಾಗಿತ್ತು. ಇದೇ ಸಂದರ್ಭದಲ್ಲಿ ಶ್ರೀಕಿ ಕಡೆಯಿಂದ 2 ಪೆನ್ಡ್ರೈವ್, ಹಾರ್ಡ್ಡಿಸ್ಕ್ ಹಾಗೂ ಆ್ಯಪಲ್ ಮ್ಯಾಕ್ಬುಕ್ ಜಪ್ತಿ ಮಾಡಲಾಗಿತ್ತು. ಮ್ಯಾಕ್ಬುಕ್ನಲ್ಲಿದ್ದ ಮಾಹಿತಿಯನ್ನೇ ಸಿಸಿಬಿ ಅಧಿಕಾರಿಗಳು, ತಿರುಚಿದ್ದರು’ ಎಂದು ಮೂಲಗಳು ಹೇಳಿವೆ.
ಪ್ರಕರಣದಲ್ಲಿ ಶ್ರೀಕಿ ಹೇಳಿಕೆಗೆ ಮಹತ್ವವಿದೆ. ಹೀಗಾಗಿ, ಆತನನ್ನು ಎಸ್ಐಟಿ ತಂಡ ವಿಚಾರಣೆ ನಡೆಸಿದೆ’ ಎಂದು ತಿಳಿಸಿವೆ.