ಬೆಂಗಳೂರು: ಸೆಪ್ಟೆಂಬರ್ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 1 ರಂದು ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರು ನಗರ, ಚಾಮರಾಜನಗರ, ಬನವಾಸಿ, ರಾಯಚೂರು, ಮಂಗಳೂರು, ಟಿ ನರಸೀಪುರ, ಕಳಸ, ಗಂಗಾವತಿ, ಜಾಲಹಳ್ಳಿ, ಹಡಗಲಿ, ಹಾಸನದಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.