ಮಂಗಳೂರು: ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿಮ್ಮೆಲೆಯಲ್ಲಿ ಪೊಲೀಸ್ ಇಲಾಖೆ ನಿಧನೆಗಳನ್ನು ಜಾರಿಗೆ ತಂದಿದೆ.ಕಾರ್ಯಕ್ರಮ ಆಯೋಜನೆಗೆ ಪೊಲೀಸ್ ಅನುಮತಿ ಕಡ್ಡಾಯಗೊಳಿಸಲಾಗಿದೆ. ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ ಕಟ್ಟಬೇಕು.
ಮಡಿಕೆ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಮಡಿಕೆ ಒಡೆಯುವ ಸ್ವಯಂ ಸೇವಕರ ಮೇಲೆ ತಂಪು ನೀರು ಚೆಲ್ಲುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.
ಮೆರವಣಿಗೆಯಲ್ಲಿ ಸುಸಜ್ಜಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿರಬೇಕು. ಮೆರವಣಿಗೆಯಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಸುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶವನ್ನು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಪ್ರಕಟನೆ ತಿಳಿಸಿದೆ.